ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 69

January 14, 2021

ಮಡಿಕೇರಿ ಜ.14 : ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5903 ಆಗಿದ್ದು, 5748 ಮಂದಿ ಗುಣಮುಖರಾಗಿದ್ದಾರೆ. 69 ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 44 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 9 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

error: Content is protected !!