ಕೊಡಗಿನಲ್ಲಿ 4040 ಶಿಕ್ಷಕರು, 6716 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ : 6 ವಿದ್ಯಾರ್ಥಿಗಳಿಗೆ ಸೋಂಕು ದೃಢ

January 14, 2021

ಮಡಿಕೇರಿ ಜ.14 : ಕೊಡಗು ಜಿಲ್ಲೆಯಲ್ಲಿ ಇಲ್ಲಿಯವರೆಗೆ 4040  ಶಿಕ್ಷಕರು ಮತ್ತು 6716 ವಿದ್ಯಾರ್ಥಿಗಳನ್ನು  ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ 4 ಶಿಕ್ಷಕರಿಗೆ ಮತ್ತು 6 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿರುತ್ತದೆ.  ಈ ಸಂಬಂಧ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಮತ್ತು ಸೋಂಕಿತರನ್ನು ಸಂಪರ್ಕತಡೆಯಲ್ಲಿಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿಯೂ ಸಹ ಶಾಲೆಗಳನ್ನು ಪ್ರಾರಂಭ ಮಾಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಯನ್ನು ಮಾಡಲಾಗುತ್ತಿದೆ.  

ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 
ಪ್ರಯೋಗಾಲಯ ಪರೀಕ್ಷಾ ವರದಿ ವಿವರ:
ಇಲ್ಲಿಯವರೆಗೆ ಒಟ್ಟು132819 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. • ಪಾಸಿಟಿವ್ ಪ್ರಕರಣಗಳು-5903• ನೆಗೆಟಿವ್ ವರದಿ ಬಂದ ಪ್ರಕರಣಗಳು-126178• ವರದಿ ನಿರೀಕ್ಷಿತ ಪ್ರಕರಣಗಳು-738. ಮೃತಪಟ್ಟ ಪ್ರಕರಣಗಳು-81
ದಾಖಲಿರುವ ಪ್ರಕರಣಗಳು:
 ಕೋವಿಡ್ ಆಸ್ಪತ್ರೆ    : 14ಕೋವಿಡ್ ಕೇರ್ ಸೆಂಟರ್  : 00ಹೋಂ ಐಸೋಲೇಶನ್      :55
ಇತರೆ ವಿಷಯಗಳು: 
ಕೊಡಗು ಜಿಲ್ಲೆಯಲ್ಲಿ ಈ ದಿನ ಹೊಸದಾಗಿ  09 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ ಈ ದಿನ  03 ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ.  ಈ ಹಿಂದೆ ತೆರೆಯಲಾಗಿದ್ದ ನಿಯಂತ್ರಿತ ಪ್ರದೇಶಗಳ ಪೈಕಿ 05 ಪ್ರದೇಶವನ್ನು  ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.   ಈ ದಿನ 05 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತವೆ.   
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ: 5903ಆಸ್ಪತ್ರೆಯಿಂದ ಬಿಡುಗಡೆಗೊಂಡ ಪ್ರಕರಣಗಳ ಸಂಖ್ಯೆ: 5753ಮೃತರ ಸಂಖ್ಯೆ: 81ಸಕ್ರಿಯ ಪ್ರಕರಣಗಳ ಸಂಖ್ಯೆ: 69ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ: 44

error: Content is protected !!