ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 5920

January 15, 2021

ಮಡಿಕೇರಿ ಜ. 15 : ಜಿಲ್ಲೆಯಲ್ಲಿ ಶುಕ್ರವಾರ 17 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
16 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 7 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5920 ಆಗಿದ್ದು, 5753 ಮಂದಿ ಗುಣಮುಖರಾಗಿದ್ದಾರೆ. 86
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 42 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

error: Content is protected !!