ಕಾರು, ಬೈಕ್ ನಡುವೆ ಡಿಕ್ಕಿ : ಬೈಕ್ ಸವಾರ ಗಂಭೀರ : ಕಡಂಗದಲ್ಲಿ ಘಟನೆ
January 15, 2021

ಮಡಿಕೇರಿ ಜ.15 : ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಂಗ ಬೊಳ್ಳೂಮಾಡು ಜಂಕ್ಷನ್ ಬಳಿ ನಡೆದಿದೆ.
ಗಾಯಾಳು ಮಡಿಕೇರಿ ತಾಲ್ಲೂಕಿನ ಚೆಯ್ಯಂಡಾಣೆ ನರಿಯಂದಡ ಗ್ರಾಮದ ನಿವಾಸಿ ಬಿ.ಜಿ.ಮುತ್ತಪ್ಪ ಅವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂದಿನ ಚಕ್ರ ಸಿಡಿದು ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.