ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣ 85

January 16, 2021

ಮಡಿಕೇರಿ ಜ. 16 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 7 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
7 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5927 ಆಗಿದ್ದು, 5761 ಮಂದಿ ಗುಣಮುಖರಾಗಿದ್ದಾರೆ. 85
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 41 ಆಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!