ಕೊಡಗಿನಲ್ಲಿ ಕೋವಿಡ್ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

January 16, 2021

ಮಡಿಕೇರಿ ಜ. 16 : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನಕ್ಕೆ ಶನಿವಾರ ಚಾಲನೆ ದೊರೆಯಿತು. ಜಿಲ್ಲೆಯಲ್ಲಿ ಪ್ರಥಮವಾಗಿ ಡಿ ದರ್ಜೆ ನೌಕರರಾದ ಪೊನ್ನಮ್ಮ ಅವರು ಕೋವಿಡ್ ವಿರುದ್ಧದ ಲಸಿಕೆ ಪಡೆದರು. ಜಿಲ್ಲೆಯ ಕೊಡಗು ವೈದ್ಯಕೀಯ ಸಂಸ್ಥೆಯ ಜಿಲ್ಲಾ ಆಸ್ಪತ್ರೆ, ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು ಆಸ್ಪತ್ರೆ ಹಾಗೂ ನಗರದ ಸಂತ ಮೈಕಲರ ಶಾಲೆ ಮತ್ತು ಕಾಕೋಟುಪರಂಬು ಆಸ್ಪತ್ರೆಯಲ್ಲಿ ಕೋವಿಡ್ ವಿರುದ್ಧದ ಲಸಿಕೆ ಹಾಕಲಾಗುತ್ತಿದೆ.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ , ಜಿ.ಪಂ.ಸಿಇಒ ಹಾಗೂ ಪ್ರಭಾರ ಜಿಲ್ಲಾಧಿಕಾರಿಯಾದ ಭಂವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಆಡಳಿತಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ.ಗೋಪಿನಾಥ್, ಡಾ.ರೂಪೇಶ್, ಡಾ.ಆನಂದ್, ಡಾ.ಮಹೇಶ್ ಇತರರು ಇದ್ದರು.

12 ಗಂಟೆ ವೇಳೆಗೆ ಜಿಲ್ಲೆಯ 5 ಕೇಂದ್ರಗಳಲ್ಲಿ ಒಟ್ಟು 48 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ 10, ಸಂತ ಮೈಕಲರ ಶಾಲೆಯಲ್ಲಿ 10, ಸೋಮವಾರಪೇಟೆ 6 ಮತ್ತು ಕಾಕೋಟು ಪರಂಬು ಆಸ್ಪತ್ರೆಯಲ್ಲಿ 10 ಮಂದಿ ಕೋರೊನಾ ವಾರಿಯರ್ಸ್ ಅವರು ಕೊರೊನಾ ಲಸಿಕೆ ಪಡೆದಿದ್ದಾರೆ.

error: Content is protected !!