ವಿರಾಜಪೇಟೆ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ

January 16, 2021

ಮಡಿಕೇರಿ ಜ. 16 : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ವಾರ್ಷಿಕ ಮೂರು ಪ್ರಶಸ್ತಿಗೆ ಇಬ್ಬರು ಪತ್ರಕರ್ತರ ವರದಿ ಆಯ್ಕೆಯಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಸಮಿತಿ ಸದಸ್ಯರಾದ ಎಸ್. ಎ. ಮುರುಳಿಧರ್ ಅವರು ತಮ್ಮ ಸಹೋದರ ಗಣೇಶ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಗೆ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸಣ್ಣುವಂಡ ಕಿಶೋರ್ ನಾಚಪ್ಪ ಅವರ ‘ಕ್ರೀಡಾ ಕಲರವ ಮತ್ತೆ ಆರಂಭ’ ವರದಿ ಆಯ್ಕೆಯಾಗಿದೆ.
ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಮ್ಮ ತಂದೆ ಸಣ್ಣುವಂಡ ಮಾದಪ್ಪ ಹಾಗೂ ತಾಯಿ ಜಾನಕಿ ಮಾದಪ್ಪ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ಪ್ರಶಸ್ತಿಗೆ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸಣ್ಣುವಂಡ ಕಿಶೋರ್ ನಾಚಪ್ಪ ಅವರ ‘ಮಣ್ಣಿನ ರಕ್ಷಣೆಗೆ ತರಬೇತಿ’ ಎಂಬ ವರದಿಗೆ ಲಭಿಸಿದೆ.
ರಾಜ್ಯ ಸಮಿತಿ ಸದಸ್ಯರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಗೆ ಶಕ್ತಿ ದಿನಪತ್ರಿಕೆಯಲ್ಲಿ ಪ್ರಕಟವಾದ ಹೆಚ್.ಕೆ ಜಗದೀಶ್ ಅವರ ‘ಒಂಟಿ ಮನೆಗೆ ಬೆಳಕು ನೀಡಿದ ರೋಟರಿ ಸಂಸ್ಥೆ’ ಎಂಬ ವರದಿ ಪಡೆದುಕೊಂಡಿದೆ. ಜ.22 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ.

error: Content is protected !!