ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು: ಉದ್ಧವ್‌ ಠಾಕ್ರೆ

January 18, 2021

ಮುಂಬಯಿ: ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಕರ್ನಾಟಕದ ಪ್ರದೇಶಗಳನ್ನು ಮರಳಿ ರಾಜ್ಯಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಘೋಷಿಸಿದ್ದಾರೆ. ‘ಮರಾಠಾ ಹುತಾತ್ಮರ ದಿನ’ವಾದ ಭಾನುವಾರ (ಜ.17) ಈ ಸಂಬಂಧ ಟ್ವೀಟ್‌ ಮಾಡಿದ್ದು, ”ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕರ್ನಾಟಕಕ್ಕೆ ಸೇರ್ಪಡೆಯಾಗಿರುವ ಪ್ರದೇಶಗಳನ್ನು ಮರಳಿ ಪಡೆಯುವುದೇ ಮರಾಠಾ ಹುತಾತ್ಮರಿಗೆ ನಾವು ಸಲ್ಲಿಸುವ ನಿಜವಾದ ಗೌರವ,” ಎಂದು ಹೇಳಿದ್ದಾರೆ.

”ಮರಾಠಾ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳಗಾವಿ ಹಾಗೂ ಇತರ ಪ್ರದೇಶಗಳು ಮತ್ತೆ ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕು. ಈ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಈ ಪ್ರದೇಶಗಳನ್ನು ಕರ್ನಾಟಕ ಆಕ್ರಮಿತ ಪ್ರದೇಶವೆಂದು ಘೋಷಿಸುತ್ತೇವೆ” ಎಂದೂ ಠಾಕ್ರೆ ತಿಳಿಸಿದ್ದಾರೆ.

error: Content is protected !!