ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

January 18, 2021

ಮಡಿಕೇರಿ ಜ.18 : ಸ್ಟಾಪ್ ಸೆಲೆಕ್ಷನ್ ಕಮಿಷನ್ ವತಿಯಿಂದ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ (ಅಸಿಸ್ಟೆಂಟ್ ಆಡಿಟ್ ಆಫೀಸರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಸೆಲೆಕ್ಷನ್ ಆಫೀಸರ್, ಇನ್ಸ್‍ಪೆಕ್ಟರ್ ಇನ್ ಇನ್‍ಕಂ ಟ್ಯಾಕ್ಸ್, ಸೆಂಟರ್ ಎಕ್ಸೈಸ್, ಪ್ರಿವೆಂಟಿವ್ಯೂ ಆಫೀಸರ್ ಪೋಸ್ಟ್, ಎನ್‍ಸಿಬಿ, ಸಬ್ ಇನ್ಸ್‍ಪೆಕ್ಟರ್ ಇನ್ ಸಿಬಿಐ, ಎನ್‍ಐಎ, ಎನ್‍ಸಿಬಿ ಜೂನಿಯರ್ ಸ್ಟಾಸ್ಟಿಕಲ್ ಆಫೀಸರ್, ಅಸಿಸ್ಟೆಂಟ್ ಅಕೌಂಟ್ ಆಡಿಟರ್) ಎಂಬ ಹುದ್ದೆಗಳಿಗೆ ಭರ್ತಿ ಮಾಡಲು ಕ್ಯಾಬಿನೇಟ್ ಗ್ರ್ಯಾಜುವೇಟ್ ಲೇವಲ್ ಎಗ್ಸಮಿನೇಷನ್ -2020ರ ನೇಮಕಾತಿ ಪರೀಕ್ಷೆಗೆ ಆನ್‍ಲೈನ್ https://ssc.nic.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ, 31 ಕೊನೆಯ ದಿನವಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿಯಲ್ಲಿ ತೇರ್ಗಡೆ. 01-01-2021 ಕ್ಕೆ ಅನ್ವಯವಾಗುವಂತೆ ಕನಿಷ್ಟ 18 ರಿಂದ 32 ವರ್ಷಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಅರ್ಜಿಯ ಶುಲ್ಕವನ್ನು ಪಾವತಿಸಲು ಪೆಬ್ರವರಿ, 06 ಕೊನೆಯ ದಿನವಾಗಿದೆ. ಆನ್‍ಲೈನ್ ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ಶುಲ್ಕ ಪಾವತಿ ಮಾಡಬಹುದು. ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ.100, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿ.ಡಬ್ಲ್ಯುಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!