ಸೋಮವಾರಪೇಟೆಯಲ್ಲಿ 4.15 ಕೋಟಿ ವೆಚ್ಚದ ಟರ್ಫ್ ಮೈದಾನ : ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

January 18, 2021

ಮಡಿಕೇರಿ ಜ.18 : ಸೋಮವಾರಪೇಟೆ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಟರ್ಫ್ ಕ್ರೀಡಾಂಗಣ ಕಾಮಗಾರಿಯನ್ನು ಸಂಸದ ಪ್ರತಾಪ್ ಸಿಂಹ ಪರಿಶೀಲಿಸಿದರು.
ಸ್ಥಳೀಯ ಪದವಿಪೂರ್ವ ಕಾಲೇಜು ಮೈದಾನದಲ್ಲಿ ರೂ.4.15ಕೋಟಿ ವೆಚ್ಚದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಿರ್ಮಿಸುತ್ತಿರುವ ಟರ್ಫ್ ಹಾಕಿ ಕ್ರೀಡಾಂಗಣದ ಕಾಮಗಾರಿ ಪ್ರಗತಿಯಲ್ಲಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಸದರು ಸಲಹೆ ನೀಡಿದರು.
ಕ್ರೀಡಾಂಗಣ ಕಾಮಗಾರಿ ಉಸ್ತುವಾರಿ ಸಮಿತಿಯ ಅಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಮಾತನಾಡಿ ಎರಡು ಭಾಗದಲ್ಲಿ ತಡೆಗೋಡೆ ನಿರ್ಮಾಣವಾಗಬೇಕಾಗಿದ್ದು, ಸಂಸದರ ನಿಧಿಯಿಂದ ಅನುದಾನ ಒದಗಿಸಬೇಕೆಂದು ಮನವಿ ಮಾಡಿದರು. ಶಾಸಕ ಅಪ್ಪಚ್ಚುರಂಜನ್ ಅವರ ಪ್ರಯತ್ನದಿಂದ ಉತ್ತಮವಾದ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದೆ ಎಂದರು.
ಸಂಸದ ಪ್ರತಾಪ್ ಸಿಂಹ ಮಾತನಾಡಿ ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯರ ಅನುದಾನ ತಡೆ ಹಿಡಿಯಲಾಗಿದೆ. ಮುಂದಿನ ಅವಧಿಯಲ್ಲಿ ಅನುದಾನವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಸಮಿತಿಯ ಪ್ರಮುಖರಾದ ಎಸ್.ಮಹೇಶ್, ಬಿ.ಎಂ.ಸುರೇಶ್, ಯಶವಂತ್, ಎಸ್.ಆರ್.ಸೋಮೇಶ್, ಕಿಬ್ಬೆಟ್ಟ ಮಧು, ಅಭಿಷೇಕ್, ಜಗದೀಶ್, ಶರತ್, ಜೀವನ್, ಸತೀಶ್ ಮಂದಣ್ಣ ಮತ್ತಿತರರು ಹಾಜರಿದ್ದರು.

error: Content is protected !!