ಮಂಗಳಾದೇವಿ ನಗರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಸಂಪನ್ನಗೊಂಡ ಬ್ರಹ್ಮಕಲಶಾಭಿಷೇಕ ಮಹೋತ್ಸವ

January 18, 2021

ಮಡಿಕೇರಿ ಜ. 18 : ನಗರದ ಮಂಗಳಾದೇವಿ ನಗರ ಬಡಾವಣೆಯಲ್ಲಿರುವ ಶ್ರೀರಾಜರಾಜೇಶ್ವರಿ ಕ್ಷೇತ್ರದಲ್ಲಿ ಶ್ರೀರಾಜರಾಜೇಶ್ವರಿ, ಶ್ರೀಮಹಾಗಣಪತಿ ಹಾಗೂ ನಾಗದೇವರುಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿದೆ.
ಬ್ರಹ್ಮ ಶ್ರೀ ವೇದಮೂರ್ತಿ ಪೆÇಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಪುಣ್ಯಾಹ, ಗಣಪತಿ ಹವನ, 9.45 ಗಂಟೆಗೆ ಸಲ್ಲುವ ಕುಂಭ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕ ಜರುಗಿತು.
ಮಧ್ಯಾಹ್ನ ಮಹಾಪೂಜೆ, ಪಲ್ಲಪೂಜೆ, ಸಾಯಂಪೂಜೆ, ರಂಗಪೂಜೆ, ಉತ್ಸವ ಬಲಿ, ಸಂಪೆÇ್ರೀಕ್ಷಣೆಯೊಂದಿಗೆ ವಿವಿಧ ಪೂಜಾ ವಿಧಿವಿಧಾನಗಳು ಸಂಪನ್ನಗೊಂಡವು.
ಬ್ರಹ್ಮಕಲಶಾಭಿಷೇಕ ಮಹೋತ್ಸವ ಪ್ರಯುಕ್ತ ಸಂಜೆ ಮಡಿಕೇರಿಯ ವೆಂಕಟೇಶ್ವರ ಕಲಾತಂಡದಿಂದ ಭಜನೆ ಸೇವೆ ಏರ್ಪಡಿಸಲಾಗಿದ್ದು, ಏಳು ದಿನಗಳ ಕಾಲ ಭಕ್ತಾಧಿಗಳಿಗೆ ಮಧ್ಯಾಹ್ನ ಹಾಗೂ ರಾತ್ರಿ ಅನ್ನದಾನ ನಡೆದವು.

ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವಾರ ಕೃಪೆಗೆ ಪಾತ್ರರಾದರು.

error: Content is protected !!