ಅಂತಿಮ ಮತದಾರರ ಪಟ್ಟಿ ಪ್ರಕಟ : ಕೊಡಗಿನಲ್ಲಿರುವ ಒಟ್ಟು ಮತದಾರರ ಸಂಖ್ಯೆ 4,46,262

January 18, 2021

ಮಡಿಕೇರಿ ಜ.18 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಾದ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಜ.18 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ, ನಾಡ ಕಚೇರಿಗಳಲ್ಲಿ, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ, ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರ ಕಚೇರಿಯಲ್ಲಿ ಪ್ರಚುರ ಪಡಿಸಲಾಗಿದೆ. ಹಾಗೂ ಜಿಲ್ಲೆಯ ಅಧಿಕೃತ ವೆಬ್‍ಸೈಟ್ ತಿತಿತಿ.ಞoಜಚಿgu.ಟಿiಛಿ.iಟಿ ನಲ್ಲಿಯೂ ಸಹ ಪ್ರಚಾರ ಪಡಿಸಲಾಗಿದೆ.
ಮತದಾರರು ಈ ಮತದಾರರ ಪಟ್ಟಿಯನ್ನು ಪರಿಶೀಲಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಕೋರಿದೆ.
2021 ರ ಜನವರಿ, 18 ರಂದು ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ವಿವರ ಇಂತಿದೆ. 208-ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು 2,24,745 ಇದರಲ್ಲಿ 1,10,826 ಪುರುಷರು ಮತ್ತು 1,13,919 ಮಹಿಳೆಯರು. 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು 2,21,517 ಇದರಲ್ಲಿ 1,10,247 ಪುರುಷರು, 2,21,517 ಮಹಿಳೆಯರು ಇದ್ದಾರೆ. ಒಟ್ಟು 4,46,262 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.

error: Content is protected !!