ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 78

January 18, 2021

ಮಡಿಕೇರಿ ಜ.18 : ಜಿಲ್ಲೆಯಲ್ಲಿ ಸೋಮವಾರ 6 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5935 ಆಗಿದ್ದು, 5776 ಮಂದಿ ಗುಣಮುಖರಾಗಿದ್ದಾರೆ. 78 ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 37 ಆಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
6 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲ್ಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ 4 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲ್ಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ 2 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

error: Content is protected !!