ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 5950

19/01/2021

ಮಡಿಕೇರಿ ಜ. 19 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 15 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5950 ಆಗಿದ್ದು, 5779 ಮಂದಿ ಗುಣಮುಖರಾಗಿದ್ದಾರೆ. 78
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 38 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.