ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಅರ್ಜಿ ಆಹ್ವಾನ

19/01/2021

ಮಡಿಕೇರಿ ಜ.18-ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2020-21 ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗುರು ಶಿಷ್ಯ ಪರಂಪರೆ ಯೋಜನೆಯಡಿ ಪ್ರತಿಷ್ಟಿತ ಸಂಸ್ಥೆಗಳ ಮೂಲಕ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ ಮತ್ತು ಗಮಕ ಕಲಾಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ, ಅಭ್ಯಾಸ ಮಾಡುತ್ತಿರುವ, ಹೆಚ್ಚಿನ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ 3 ತಿಂಗಳವರೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
14 ರಿಂದ 26 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಅಕಾಡೆಮಿಯ ಕಚೇರಿ ವೇಳೆಯಲ್ಲಿ ಅಲ್ಲದೇ ಅಕಾಡೆಮಿ ಅಂತರ್ಜಾಲ ತಾಣ https//karnatakasangeetanrityaacademy.com ಮೂಲಕ ಪಡೆದು ಸಲ್ಲಿಸಬಹುದು. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ಪಡೆಯಬಹುದು.
ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇಲ್ಲಿಗೆ ಜನವರಿ, 30 ರೊಳಗೆ ಕಳುಹಿಸಬೇಕು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ.ಅಂಗಡಿ ಅವರು ತಿಳಿಸಿದ್ದಾರೆ.