ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿದೆ ರಫೇಲ್

19/01/2021

ಹೊಸದಿಲ್ಲಿ: ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭಕ್ಕೆ ಭರ್ಜರಿ ತಯಾರಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಈಗಾಗಲೇ ಸೇನಾ ಪಡೆಗಳು ಭರ್ಜರಿ ತಾಲೀಮು ನಡೆಸುತ್ತಿವೆ.

ಅದರಂತೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಇತ್ತೀಚಿಗಷ್ಟೇ ಭಾರತೀಯ ವಾಯಸೇನೆಗೆ ಸೇರ್ಪಡೆಗೊಂಡಿರುವ ಅತ್ಯಾಧುನಿಕ ರಫೇಲ್ ಯುದ್ಧ ವಿಮಾನಗಳು ಕೂಡ ಭಾಗವಹಿಸಲಿರುವುದು ವಿಶೇಷ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಫೇಲ್ ಯುದ್ಧ ವಿಮಾನಗಳೂ ಭಾಗವಹಿಸಲಿದ್ದು, ಭಾರತೀಯ ವಾಯುಸೇನೆಯ ಶಕ್ತಿ ಪ್ರದರ್ಶನಕ್ಕೆ ಈ ಬಾರಿಯ ಗಣರಾಜ್ಯೋತ್ಸವ ವೇದಿಕೆ ಕಲ್ಪಿಸಲಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ವಾಯುಸೇನೆಯ ವಕ್ತಾರ ವಿಂಗ್ ಕಮಾಂಡರ್ ಇಂದ್ರನೀಲ್ ನಂದಿ, ಗಣರಾಜ್ಯೋತ್ಸವದಲ್ಲಿ ರಫೇಲ್ ಯುದ್ಧ ವಿಮಾನಗಳ ತಾಲೀಮು ನಡೆಸಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.