ಸಂಘ ಸಂಸ್ಥೆಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

January 19, 2021

ಮಡಿಕೇರಿ ಜ.19 : ಪ್ರಸಕ್ತ(2020-21) ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ಕೊಡಗು ಜಿಲ್ಲೆಯ ಪ್ರತಿ ತಾಲ್ಲೂಕಿನ ಪರಿಶಿಷ್ಟ ಜಾತಿಯ ಎರಡು ಸಂಘ ಸಂಸ್ಥೆಗಳಿಗೆ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಒಂದು ಯುವಜನ ಸಂಘ ಸಂಸ್ಥೆಗಳಿಗೆ ನೋಂದಾಣಿ ಮಾಡಲು ಸಹಾಯಧನ ನೀಡುವ ಹೊಸ ಯೋಜನೆ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳು ಫೆಬ್ರವರಿ, 02 ರೊಳಗೆ ಈ ಕಚೇರಿಯಲ್ಲಿ ನೋಂದಾವಣೆ ಮಾಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಅವರು ಕೋರಿದ್ದಾರೆ.

error: Content is protected !!