ಜ.21 ರಂದು ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ

January 19, 2021

ಮಡಿಕೇರಿ ಜ.19 : ಪ್ರಸಕ್ತ(2020-21) ಸಾಲಿನ ಗಣರಾಜ್ಯೋತ್ಸವ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ಕೊಡಗು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ಜನವರಿ, 21 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ 21 ವರ್ಷಕ್ಕೆ ಒಳಪಟ್ಟ ಬಾಲಕ/ ಬಾಲಕಿಯರಿಗೆ ಹಾಗೂ 21 ವರ್ಷ ಮೇಲ್ಪಟ್ಟ ಪುರುಷರಿಗೆ ಸಿಂಗಲ್ಸ್ ಮತ್ತು ಡಬಲ್ಸ್ ವಿಭಾಗದಲ್ಲಿ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಟೇಬಲ್ ಟೆನ್ನಿಸ್ ಆಟಗಾರರು ಟಿ.ಟಿ.ಬ್ಯಾಟ್ ಅನ್ನು ತಾವೇ ತರತಕ್ಕದ್ದು ಹಾಗೂ ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ.
ಈ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ಈ ಕಚೇರಿಯ ದೂರವಾಣಿ ಸಂಖ್ಯೆ: 08272-228985 ರಲ್ಲಿ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ತಿಳಿಸಿದ್ದಾರೆ.

error: Content is protected !!