ಪ್ರತಿಭಾವಂತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

January 19, 2021

ಮಡಿಕೇರಿ ಜ.19 : ಪ್ರಸಕ್ತ(2020-21) ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನ ನೀಡುವ ಹೊಸ ಯೋಜನೆ ಅನುಷ್ಠಾನ ಮಾಡಬೇಕಿದೆ.
ಅರ್ಹ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 19 ವರ್ಷ ಒಳಪಟ್ಟ ಹಿಂದಿನ ಮೂರು ವರ್ಷಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿರುವ ಹಾಗೂ ಹಿಂದಿನ ಕ್ಯಾಲೆಂಡರ್ ವರ್ಷಗಳಲ್ಲಿ ಅಂತರ್‍ರಾಷ್ಟ್ರೀಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಅಥವಾ ರಾಜ್ಯ ಮಟ್ಟದ/ ಅಂತರ್‍ರಾಜ್ಯ/ ಅಂತರ್-ವಿಶ್ವವಿದ್ಯಾನಿಲಯ/ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಾಧನೆ ದಾಖಲಿಸಿರುವ ಪ್ರತಿಭಾವಂತ ಕ್ರೀಡಾಪಟುಗಳಿಂದ (ವಿಕಲಚೇತನ ಕ್ರೀಡಾಪಟುಗಳೂ ಸೇರಿದಂತೆ) ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 19 ವರ್ಷ ಒಳಪಟ್ಟ ಕ್ರೀಡಾಪಟುಗಳು ಫೆಬ್ರವರಿ, 02 ರೊಳಗೆ ಈ ಕಚೇರಿಯಲ್ಲಿ ಕ್ರೀಡಾ ಸಾಧನೆಯ ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ತಿಳಿಸಿದ್ದಾರೆ.

error: Content is protected !!