Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:56 PM Tuesday 26-October 2021

ಇಬ್ಬರು ಕಾರು ಚೋರರ ಬಂಧನ : ಮಡಿಕೇರಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

19/01/2021

ಮಡಿಕೇರಿ ಜ.19 : ಕಾರನ್ನು ಕಳವು ಮಾಡಿ ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಡಿಕೇರಿ ರಾಜರಾಜೇಶ್ವರಿ ನಗರದ ನಿವಾಸಿ ಎಂ.ಎಂ. ರಝಾಕ್(31) ಮತ್ತು ಮೇಕೇರಿ ನಿವಾಸಿ ಕಲಂದರ್ ಎಂ.ಹೆಚ್.(31) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಕಳವು ಮಾಡಲಾದ ಕಾರು ಮತ್ತು ಕೃತ್ಯಕ್ಕೆ ಬಳಸಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಡಿಕೇರಿ ಆಝಾದ್ ನಗರ ನಿವಾಸಿ ಎಂ.ಎಸ್. ಕುರೈಶಿ ಅವರಿಗೆ ಸೇರಿದ ಮಾರುತಿ ಜೆನ್ ಕಾರನ್ನು(ಕೆ.ಎ.01 ಎಂ.ಎ. 4675) ಓಂಕಾರೇಶ್ವರ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು. ಆದರೆ 2020ರ ಡಿಸೆಂಬರ್ 30ರ ರಾತ್ರಿ 11.30ಕ್ಕೆ ಈ ಕಾರು ಕಳವಾಗಿತ್ತು. ಈ ಬಗ್ಗೆ ಕಾರಿನ ಮಾಲೀಕರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಡಿಕೇರಿ ನಗರ ಸೇರಿದಂತೆ ಸುತ್ತ ಮುತ್ತಲಿನ ಎಲ್ಲಾ ಸಿ.ಸಿ. ಕ್ಯಾಮಾರಾಗಳನ್ನು ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಕಳುವಾದ ಕಾರು ಸೋಮವಾರಪೇಟೆ ಮೂಲಕ ಕೊಡ್ಲಿಪೇಟೆ ಕಡೆಗೆ ತೆರಳಿರುವುದು ಕಂಡು ಬಂದಿತ್ತು.
ಈ ಜಾಡನ್ನು ಆಧರಿಸಿ ತನಿಖೆ ನಡೆಸಿದ ಸಂದರ್ಭ ಕೊಡ್ಲಿಪೇಟೆಯ ಪೆಟ್ರೋಲ್ ಬಂಕ್ ಒಂದರಲ್ಲಿ ಕದ್ದ ಕಾರಿಗೆ ಇಂಧನ ತುಂಬಿಸಿರುವುದು ಸಿ.ಸಿ.ಕ್ಯಾಮಾರಾದಲ್ಲಿ ಸೆರೆಯಾಗಿತ್ತು. ಕಾರು ಕಳವು ಮಾಡಿದ ಆರೋಪಿಗಳು ಎಟಿಎಂ ಕಾರ್ಡ್ ಮೂಲಕ ಪೆಟ್ರೋಲ್ ಬಂಕ್‍ನಲ್ಲಿ ಹಣ ಪಾವತಿಸಿರುವುದನ್ನು ಪತ್ತೆ ಹಚ್ಚಿ, ಹೆಚ್ಚಿನ ತನಿಖೆ ಮಾಡಿದ ಸಂದರ್ಭ ಜ.18ರಂದು ಇಬ್ಬರು ಕಾರು ಕಳ್ಳರು ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಆರೋಪಿಗಳು ಕಾರನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುವ ಸಲುವಾಗಿ ಕಳ್ಳತನ ಮಾಡಿರುವುದಾಗಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ನಿರ್ದೇಶನದಂತೆ, ಡಿವೈಎಸ್‍ಪಿ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ಉಪ ನಿರೀಕ್ಷಕಿ ಎಂ.ಟಿ. ಅಂತಿಮ, ಎಎಸ್‍ಐ ಗೋವಿಂದರಾಜು, ಅಪರಾಧ ಪತ್ತೆ ದಳದ ಸಿಬ್ಬಂದಿಗಳಾದ ಕೆ.ಕೆ. ದಿನೇಶ್,ಹೆಚ್.ಎಸ್. ಶ್ರೀನಿವಾಸ, ಬಿ.ಕೆ. ಪ್ರವೀಣ್, ನಾಗರಾಜ್ ಕಡಗಣ್ಣನವರ್, ಬಿ.ಜಿ.ಅರುಣ್ ಕುಮಾರ್, ಬಿ.ಜಿ. ದಿವ್ಯ ಹಾಗೂ ಸಿಡಿಆರ್ ಶೆಲ್‍ನ ಸಿ.ಕೆ. ರಾಜೇಶ್, ಗಿರೀಶ್ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.