ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣ 76

20/01/2021

ಮಡಿಕೇರಿ ಜ. 20 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 5 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5955 ಆಗಿದ್ದು, 5798 ಮಂದಿ ಗುಣಮುಖರಾಗಿದ್ದಾರೆ. 76
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 36 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.