ಈರಳೆವಳಮುಡಿ ಗ್ರಾಮದ ಅಂಗನವಾಡಿಗೆ ತೆರಳುವ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಚಾಲನೆ

January 20, 2021

ಮಡಿಕೇರಿ ಜ.20 : ಈರಳೆವಳಮುಡಿ ಗ್ರಾಮದ ಅಂಗನವಾಡಿ ರಸ್ತೆ ಕಾಂಕ್ರಿಟೀಕರಣಗೊಳ್ಳುತ್ತಿದೆ. ಸುಮಾರು 4 ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಸೋಮವಾರಪೇಟೆ ತಾ.ಪಂ ಸದಸ್ಯ ಬಲ್ಲಾರಂಡ ಮಣಿಉತ್ತಪ್ಪ ಚಾಲನೆ ನೀಡಿದರು.
ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ತಿಳಿಸಿದ ಮಣಿಉತ್ತಪ್ಪ ಅವರು, ಸರ್ಕಾರದ ಅನುದಾನ ಸದುಪಯೋಗವಾಗಬೇಕೆಂದರು.
ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಅಡಿಕೆರ ಜಯ, ಗ್ರಾ.ಪಂ ಸದಸ್ಯ ಕಂಠಿ ಕಾರ್ಯಪ್ಪ, ಗುತ್ತಿಗೆದಾರ ಅಂಬುದಾಸ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.

error: Content is protected !!