ಅಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

January 20, 2021

ಮಡಿಕೇರಿ ಜ.20 : ಪ್ರಸಕ್ತ (2020-21) ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಸರ್ಕಾರದ ಆದೇಶದನ್ವಯ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್‍ಕಿಟ್‍ಗಳನ್ನು ವಿತರಿಸಲು ಕೊಡಗು ಜಿಲ್ಲೆಗೆ 07 ಗುರಿ ನಿಗದಿಪಡಿಸಿದ್ದು, ಸಾಮಾನ್ಯದಡಿ-05 ಹಾಗೂ ಎಸ್‍ಸಿಪಿ ಯೋಜನೆಯಡಿ 02 ಗುರಿ ಇದೆ.
ಆದ್ದರಿಂದ ಎಸ್‍ಎಸ್‍ಎಲ್‍ಸಿ ಹಾಗೂ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಶೇ.40 ಅಥವಾ ಅದಕ್ಕಿಂತ ಹೆಚ್ಚಿನ ಅಂಧತ್ವ ಹೊಂದಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ದೂರವಾಣಿ ಸಂಖ್ಯೆ.08272 295829 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!