ಜ.21 ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ

20/01/2021

ಮಡಿಕೇರಿ ಜ.20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಜನವರಿ, 21 ರಂದು ಬೆಳಗ್ಗೆ 11 ಗಂಟೆಗೆ ನಗರದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ನಡೆಯಲಿದೆ.
ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರಾದ ಬಿ.ನಿರ್ಮಲ ಕುಮಾರ್, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಮಹಿಳಾ ಸದಸ್ಯರಾದ ಎನ್.ಆರ್.ರೂಪ, ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಎ.ಎ.ಚಂಗಪ್ಪ, ಜೂನಿಯರ್ ಕಾಲೇಜು ಪ್ರಾಂಶುಪಾಲರಾದ ಪಿ.ಆರ್.ವಿಜಯ, ಗಾಳಿಬೀಡು ಪ್ರೌಢಶಾಲೆಯ ಶಿಕ್ಷಕರಾದ ರಮೇಶ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ, ತೂಕ, ಅಳತೆ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಆರ್.ಲಿಂಗರಾಜು ಇತರರು ಪಾಲ್ಗೊಳ್ಳಲಿದ್ದಾರೆ.