ಕೊಡಗು ಜಿಲ್ಲಾ ಬಿಜೆಪಿ ಕಚೇರಿ ಕಾಫಿಕೃಪಾ ಕಟ್ಟಡಕ್ಕೆ ಸ್ಥಳಾಂತರ

January 21, 2021

ಮಡಿಕೇರಿ ಜ. 21 : ಕೊಡಗು ಜಿಲ್ಲಾ ಬಿಜೆಪಿ ಕಚೇರಿಯನ್ನು ನಗರದ “ಕಾಫಿಕೃಪಾ” ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅವರ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು.
ಈ ಸಂದರ್ಭ ಬಿಜೆಪಿ ವಕ್ತಾರ ಮಹೇಶ್ ಜೈನಿ ಮಾತನಾಡಿ, ಪಕ್ಷದ ಸ್ವಂತ ಕಟ್ಟಡ ನಿರ್ಮಾಣಗೊಳ್ಳುವವರೆಗೂ ಇದೇ ಕಚೇರಿಯಲ್ಲಿ ಪಕ್ಷದ ಕಾರ್ಯಚಟುವಟಿಕೆಗಳು ನಡೆಯಲಿದೆ ಎಂದರು.
ವಿಧಾನಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಹಾಗೂ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ಪ್ರಮುಖರಾದ ಕಾಳಚಂಡ ಎಂ. ಅಪ್ಪಣ್ಣ, ಬಿ.ಕೆ.ಅರುಣ್ ಕುಮಾರ್, ಅನಿತಾ ಪೂವಯ್ಯ, ಬಿ.ಕೆ.ಜಗದೀಶ್, ಹೆಚ್.ಕೆ.ಮಾದಪ್ಪ, ನಾಪಂಡ ರವಿ ಕಾಳಪ್ಪ, ಬಿ.ಎನ್. ಭುವನೇಶ್ವರಿ, ಮನು ಮಂಜುನಾಥ್ ಸೇರಿದಂತೆ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.

error: Content is protected !!