ಕಸಾಪ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

21/01/2021

ಮಡಿಕೇರಿ ಜ.21 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಳ್ಳಲಾಗಿರುವ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಪರಿಷತ್ತಿನ ಸುವರ್ಣ ಸಂಭ್ರಮ ಕಾರ್ಯಕ್ರಮದ ಲಾಂಛನವನ್ನು ಬಿಡುಗಡೆ ಮಾಡಲಾಯಿತು.
ನಗರದ ಸುದರ್ಶನ ಅತಿಥಿ ಗೃಹದಲ್ಲಿಂದು ನಡೆದ ಸರಳ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತು ಸದಸ್ಯರಾದ ಸುನಿಲ್ ಸುಬ್ರಮಣಿ ಅವರು ಲಾಂಛನ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಸಮ್ಮೇಳನಕ್ಕೆ ಎಲ್ಲ ರೀತಿಯ ಸಹಕಾರ ನೀಡುವದಾಗಿ ಹೇಳಿದರಲ್ಲದೆ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್, ಜಿಲ್ಲಾ ನಿರ್ದೇಶಕ ಧನಂಜಯ್, ಮಡಿಕೇರಿ ತಾಲೂಕು ಗೌರವ ಕಾರ್ಯದರ್ಶಿ ಡಾ.ಕೂಡಕಂಡಿ ದಯಾನಂದ, ನಿರ್ದೇಶಕಿ ಪರ್ಲಕೋಟಿ ಸುನಿತಾ ಪ್ರೀತು ಇದ್ದರು.