20 ವರ್ಷಗಳಿಂದಲೂ ಅಭಿವೃದ್ಧಿ ಕಾಣದ ಅರೆಕಾಡು ರಸ್ತೆ : ಪ್ರತಿಭಟನೆ ಎಚ್ಚರಿಕೆ ನೀಡಿದ ಗ್ರಾಮಸ್ಥರು

January 21, 2021

ಸಿದ್ದಾಪುರ ಜ. 21 : ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕಾಣದೆ ಕಳೆದ ಹಲವು ವರ್ಷಗಳಿಂದಲೂ ವಾಹನ ಸಂಚಾರ ಹಾಗೂ ಸಾರ್ವಜನಿಕರಿಗೆ ನಡೆದಾಡಲೂ ಸಾಧ್ಯವಾಗದಂಥ ಪರಿಸ್ಥಿತಿ ನಿರ್ಮಾಣವಾಗಿರುವ ಅರೆಕಾಡು ನೇತಾಜಿ ನಗರ ಸುತ್ತಮುತ್ತಲ ಗ್ರಾಮದ ರಸ್ತೆಯನ್ನು ಆದಷ್ಟು ಬೇಗ ಅಭಿವದ್ಧಿ ಪಡಿಸದಿದ್ದಲ್ಲಿ ಮುಖ್ಯರಸ್ತೆಯನ್ನು ಬಂದ್ ಮಾಡುವ ಮೂಲಕ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅರೆಕಾಡು ನಾಗರಿಕ ಹೋರಾಟ ಸಮಿತಿಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡು, ಹಚ್ಚಿನಾಡು, ಕಟ್ಟೆಮಾಡು ಸಂಪರ್ಕದ ರಸ್ತೆಗಳು ಹಲವು ವರ್ಷಗಳಿಂದ ಡಾಂಬರೀಕರಣ ಕಾಣದೆ ಹಲವು ವರ್ಷಗಳಿಂದ ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ನಡೆದಾಡಲೂ ಸಾಧ್ಯವಾಗದಂಥ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಈ ಭಾಗದ ಜನರು ಸಂಕಷ್ಟದ ಜೀವನ ನಡೆಸುವಂತಾಗಿದ್ದು, ರಸ್ತೆಅಭಿವೃದ್ಧಿ ಪಡಿಸದಿದ್ದಲ್ಲಿ ಮುಂಬರುವ ಎಲ್ಲಾ ಚುನಾವಣೆಯ ಮತದಾನವನ್ನು ಸಾಮೂಹಿಕವಾಗಿ ಬಹಿಷ್ಕರಿಸಲಾಗುವುದು ಎಂದು ಸಮಿತಿಯ ಪ್ರಮುಖ ಪಿ. ಕೆ ಯೂಸುಫ್ ತಿಳಿಸಿದ್ದಾರೆ .
ಅರೆಕಾಡು ಗ್ರಾಮದಲ್ಲಿ ಹೋರಾಟ ಸಮಿತಿಯ ಪದಾಧಿಕಾರಿಗಳ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಮಿತಿಯ ಪ್ರಮುಖ ಪೆÇನ್ನಪ್ಪ, ಅರೆಕಾಡು ಸುತ್ತಮುತ್ತಲ ಗ್ರಾಮಗಳಲ್ಲಿ ಸಾವಿರಾರು ಕುಟುಂಬಗಳು ಕಳೆದ ಹಲವು ವರ್ಷಗಳಿಂದಲೂ ವಾಸವಾಗಿದ್ದು, ಅಭಿವೃದ್ಧಿಕಾಣದ ರಸ್ತೆಯಲ್ಲಿ ಶಾಲಾ ಮಕ್ಕಳು, ಕಾರ್ಮಿಕರು, ಬೆಳೆಗಾರರು, ಸಾರ್ವಜನಿಕರು ಹರಸಾಹಸ ಪಟ್ಟು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿz.É ಈ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ರಸ್ತೆ ಅಭಿವೃದ್ಧಿ ಪಡಿಸಲು ಮನವಿ ಸಲ್ಲಿಸಲಾಗಿದ್ದರೂ ಇದುವರೆಗೆ ಯಾರೂ ಇತ್ತಕಡೆ ತಿರುಗಿಯೂ ನೋಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚುನಾವಣಾ ಸಂದರ್ಭದಲ್ಲಿ ಮತಯಾಚನೆಗೆ ಬರುವ ಜನಪ್ರತಿನಿಧಿಗಳು ಮತ್ತೆ ಇತ್ತಕಡೆ ತಿರುಗಿಯೂ ನೋಡದೆ ಗ್ರಾಮವನ್ನ ಎಲ್ಲಾ ರೀತಿಯಲ್ಲೂ ಕಡೆಗಣಿಸಿದ್ದಾರೆ. ಗ್ರಾಮಸ್ಥರ ತಾಳ್ಮೆಯನ್ನು ಪರೀಕ್ಷಿಸದೆ ಕೂಡಲೇ ರಸ್ತೆ ಅಭಿವೃದ್ಧಿ ಪಡಿಸದಿದ್ದಲ್ಲಿ ಮುಖ್ಯರಸ್ತೆ ಬಂದ್ ಮಾಡುವ ಮೂಲಕ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಹೋರಾಟ ಸಮಿತಿಯ ಪ್ರಮುಖ ಕಾವೇರಪ್ಪ ಮಾತನಾಡಿ, ಅರೆಕಾಡು ಗ್ರಾಮದಿಂದ ಸಂಪರ್ಕ ಕಲ್ಪಿಸುವ ಹಚ್ಚಿನಾಡು ಹಾಗೂ ಕಟ್ಟೆಮಾಡು ರಸ್ತೆಗಳು ಅಭಿವೃದ್ಧಿಕಾಣದೆ ಹಲವು ವರ್ಷಗಳಿಂದ ಗುಂಡಿ ಮಯವಾಗಿ ಪರಿಣಮಿಸಿದೆ.
ಗ್ರಾಮಕ್ಕೆ ಬಸ್ ಸಂಚಾರ ಇಲ್ಲದೆ ಖಾಸಗಿ ವಾಹನಗಳಿಗೆ ದುಬಾರಿ ಬಾಡಿಗೆ ನೀಡಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಇಂದಿಗೂ ಡಾಮರೀಕರಣ ಮಾಡದೆ ಕಡೆಗಣಿಸಿರುವುದರಿಂದ ಜನರು ನಡೆದಾಡಲು ಸಾಧ್ಯವಾಗದಂತಾಗಿದೆ. ಕೂಡಲೇ ಈ ಭಾಗದ ರಸ್ತೆಗಳನ್ನು ದುರಸ್ತಿ ಪಡಿಸದಿದ್ದಲ್ಲಿ ಗ್ರಾಮಸ್ಥರನ್ನು ಒಗ್ಗೂಡಿಸಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಹೋರಾಟ ಸಮಿತಿಯ ಪ್ರಮುಖ ರಂಜಿ ತಮ್ಮಯ್ಯ ಮಾತನಾಡಿ, ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಶಾಸಕರು, ಸಂಸದರು ಇತ್ತಕಡೆ ತಿರುಗಿಯೂ ನೋಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಭರವಸೆಯ ಮಾತುಗಳನ್ನಾಡಿ ಮತ ಪಡೆದು ಹೋದ ನಂತರ
ಮತ್ತೊಂದು ಚುನಾವಣೆಯಲ್ಲಿ ಕಾಣಿಸಿಕೊಳ್ಳುತ್ತಾರೆ. ಮತದಾನ ಮಾಡಿದ ಮತದಾರರು ಮೂಲ ಸೌಕರ್ಯ ವಂಚಿತರಾಗಿ ಬದುಕು ಸಾಗಿಸುವ ಮೂಲಕ ನಡೆದಾಡಲು ಸೂಕ್ತ ರಸ್ತೆಯೂ ಇಲ್ಲದ ಪರಿಸ್ಥಿತಿಯಲ್ಲಿ ಜೀವನ ನಡೆಸಬೇಕಾಗಿದೆ.
ರಸ್ತೆಯುದ್ದಕ್ಕೂ ಗುಂಡಿಗಳಾಗಿ ಸಾರ್ವಜನಿಕರ ಹರಸಾಹಸ ಪಟ್ಟು ನಡೆದಾಡಬೇಕಾಗಿದೆ. ತುರ್ತು ಸಂದರ್ಭದಲ್ಲಿ ಗ್ರಾಮಕ್ಕೆ ಆಂಬುಲೆನ್ಸ್ ಬರಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸಾಮಾನ್ಯ ಜನರುದು ಬಾರಿ ಹಣ ನೀಡಿ ಬಾಡಿಗೆ ವಾಹನಗಳಲ್ಲಿ ಸಂಚರಿಸುತ್ತಿದ್ದಾರೆ. ರಸ್ತೆಗಳು ಹಾಳಾಗಿರುವುದರಿಂದ ಕೆಲವೊಮ್ಮೆ ವಾಹನ ಸವಾರರು ಗ್ರಾಮಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಸಾರ್ವಜನಿಕರಿಗೆ ನಡೆದಾಡಲು ಸೂಕ್ತ ರಸ್ತೆ ಮಾಡಿಕೊಡಲು ಸಾಧ್ಯವಾಗದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ತೀವ್ರರೀತಿಯ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಮಿತಿಯ ಪ್ರಮುಖ ನಾಣಯ್ಯ ಮಾತನಾಡಿ ಕಳೆದ ಇಪ್ಪತ್ತು ವರ್ಷಗಳಿಂದಲೂ ಅಭಿವೃದ್ಧಿಕಾಣದೆ ಗುಂಡಿಮಯವಾಗಿರುವ ರಸ್ತೆಯಲ್ಲಿ ಜನಪ್ರತಿನಿಧಿಗಳು ಒಮ್ಮೆ ಸಂಚರಿಸಿ ನೋಡಿ
ಹದಗೆಟ್ಟ ರಸ್ತೆಯಲ್ಲಿ ಜನರ ಸಂಚಾರ ಹೇಗಿರುತ್ತೆ ತಿಳಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕೇವಲ ಗುದ್ದಲಿ ಪೂಜೆಗಳಿಗೆ ಸೀಮಿತವಾಗದೆ ಅಭಿವೃದ್ಧಿ ಕಾಣದ ರಸ್ತೆಗಳನ್ನು
ಜಿಲ್ಲಾ ಪಂಚಾಯ್ತಿ , ಶಾಸಕರು, ಸಂಸದರ ಅನುದಾನದಿಂದ ರಸ್ತೆಅಭಿವೃದ್ಧಿಪಡಿಸಬೇಕು. ಮತ ಪಡೆದು ಅಭಿವೃದ್ಧಿಯನ್ನ ಮರೆತರೆ ಮುಂದಿನ ಚುನಾವಣೆಗಳಲ್ಲಿ ಬಹಿμÁ್ಕರ ಮಾಡುವ ಮೂಲಕ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.
ಈ ಸಂದರ್ಭ ಸಮಿತಿಯ ಪ್ರಮುಖರಾದ ಉμÁತಂಗಮ್ಮ, ಇಬ್ರಾಹಿಂ, ಸೋಮಯ್ಯ, ಅಲಿ, ಗುರುರಾಜ್, ಸೈನುದೀನ್, ಅರುಣ್, ಮೊಹಮ್ಮದ್‍ಕುಟ್ಟಿ ಹಾಜಿ, ಕಾವೇಪ್ಪ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು

error: Content is protected !!