ಜ.28 ರಂದು ವಿರಾಜಪೇಟೆಯಲ್ಲಿ ಮರಳು ಹರಾಜು

22/01/2021

ಮಡಿಕೇರಿ ಜ.21 : ವಿರಾಜಪೇಟೆ ತಾಲ್ಲೂಕಿನ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಸಾಮಾನ್ಯ ಮರಳನ್ನು ನ್ಯಾಯಾಲಯದ ಆದೇಶದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಶೀಲ್ದಾರರು, ವಿರಾಜಪೇಟೆ ಹಾಗೂ ಪೊಲೀಸ್ ಇಲಾಖೆಯ ಸಮ್ಮುಖದಲ್ಲಿ ಜ.28 ರಂದು ಬೆಳಗ್ಗೆ 11.30 ಗಂಟೆಗೆ ಶ್ರೀಮಂಗಲ ಪೊಲೀಸ್ ಠಾಣಾ ಆವರಣದಲ್ಲಿ ಹರಾಜು ನಡೆಸಲಾಗುವುದು.
ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಈ ಕಛೇರಿ ದೂರವಾಣಿ ಸಂ: 08272-228523 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಅವರು ತಿಳಿಸಿದ್ದಾರೆ.