ಕುಶಾಲನಗರದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

22/01/2021

ಮಡಿಕೇರಿ ಜ. 22 : ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಮೈಸೂರಿನ ಡಿ.ಆರ್.ಎಂ ಆಸ್ಪತ್ರೆಯ ವತಿಯಿಂದ ಎರಡು ದಿನಗಳ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಮೈಸೂರಿನ ಡಿ.ಆರ್.ಎಂ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ತಂಡದಿಂದ ಈ ಆರೋಗ್ಯ ತಪಾಸಣೆಗೆ ಶಿಬಿರವು ನಡೆಯುತ್ತಿದ್ದು, ಸೋಮವಾಪಪೇಟೆ ಉಪ ವಿಭಾಗದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಇದರ ಪ್ರಯೋಜನ ಪಡೆದುಕೊಂಡರು.