ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಿಸಿದ ಶಾಸಕ ಕೆ.ಜಿ.ಬೋಪಯ್ಯ

ಮಡಿಕೇರಿ ಜ.22 : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ನಿಧಿ ಸಮರ್ಪಿಸಿದರು.
ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಮ್ಮಿಕೊಂಡಿರುವ ನಿಧಿ ಸಮರ್ಪಣಾ ಅಭಿಯಾನದಡಿ ಶುಕ್ರವಾರ ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಕೆ.ಕೆ.ಮಹೇಶ್ ಕುಮಾರ್ ಅವರ ಮೂಲಕ ನಿಧಿಯನ್ನು ನೀಡಿದರು.
ಈ ಸಂದರ್ಭ ಮಾತನಾಡಿದ ಕೆ.ಜಿ.ಬೋಪಯ್ಯ ಅವರು, 1992ರಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ತಾವು ಪಾಲ್ಗೊಂಡ ನೆನಪುಗಳನ್ನು ಹಂಚಿಕೊಂಡರಲ್ಲದೆ, ಈಗ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ನಿಧಿಯನ್ನು ಸಮರ್ಪಿಸುತ್ತಿರುವುದು ನನ್ನ ಸೌಭಾಗ್ಯ ಎಂದು ಹರ್ಷ ವ್ಯಕ್ತಪಡಿಸಿದರು. ಇದೊಂದು ಪವಿತ್ರ ಕಾರ್ಯವಾಗಿದ್ದು, ಮನೆ ಮನೆಗೆ ಕಾರ್ಯಕರ್ತರು ಬಂದಾಗ ರಶೀದಿ ಪಡೆದು ತಮ್ಮ ಕೈಲಾದಷ್ಟು ಹಣವನ್ನು ಪ್ರೀತಿ ಪೂರ್ವಕವಾಗಿ ಸಮರ್ಪಿಸಬೇಕು ಎಂದು ಕೆ.ಜಿ.ಬೋಪಯ್ಯ ಮನವಿ ಮಾಡಿದರು. ನಿಧಿ ಸಮರ್ಪಣೆ ಸಂದರ್ಭ ಶಾಸಕರ ಪತ್ನಿ ಕುಂತಿ ಬೋಪಯ್ಯ ಜೊತೆಗಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಅರುಣ್ ಕೂರ್ಗ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಪಿ.ಎಂ.ರವಿ, ಬಿ.ಜೆ.ಪಿಯ ಪೆÇನ್ನಚ್ಚನ ಮಧು, ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯ ಅಧ್ಯಕ್ಷ ಮಹೇಶ್ ಅಪ್ಪು, ಈಶ್ವರ್ ಹಾಗೂ ಯವ ಮೋರ್ಚಾದ ವಿವೇಕ್ ನರೇನ್ ಉಪಸ್ಥಿತರಿದ್ದರು.
