ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 57

January 23, 2021

ಮಡಿಕೇರಿ ಜ. 23 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 3 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5970 ಆಗಿದ್ದು, 5832 ಮಂದಿ ಗುಣಮುಖರಾಗಿದ್ದಾರೆ. 57
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 31 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

error: Content is protected !!