ಜ.28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪನವರ 122ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ

January 23, 2021

ಮಡಿಕೇರಿ ಜ.23 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪನವರ 122ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಜನವರಿ 28 ರಂದು ಮಧ್ಯಾಹ್ನ 2 ಗಂಟೆಗೆ ಮಡಿಕೇರಿಯ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಹಿರಿಯ ಜಾನಪದ ಸಾಹಿತಿಯಾದ ಬಾಚರಣಿಯಂಡ ಪಿ.ಅಪ್ಪಣ್ಣ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ಕರ್ನಲ್ ಕೆ.ಸಿ.ಸುಬ್ಬಯ್ಯ ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ಸಂಚಾಲಕರಾದ ಮೇಜರ್ ಬಿದ್ದಂಡ.ಎ.ನಂಜಪ್ಪ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಡಾ.ಐ.ಮಾ.ಮುತ್ತಣ್ಣ ಆಂಗ್ಲ ಭಾಷೆಯಲ್ಲಿ ಬರೆದ ‘GENERAL CARIAPPA’ ಪುಸ್ತಕವನ್ನು ಶ್ರೀಮತಿ ಮೊಣ್ಣಂಡ ಶೋಭಾ ಸುಬ್ಬಯ್ಯ ನವರು ಕೊಡವ ಭಾಷೆಗೆ ತರ್ಜುಮೆ ಮಾಡಿದ್ದಾರೆ. ಈ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು. ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ತ್ರೈಮಾಸಿಕ ಸಂಚಿಕೆಯಾಗಿರುವ ‘ಪೊಂಗುರಿ’ ಯನ್ನು ಕೂಡ ಬಿಡುಗಡೆ ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ಹಾಜರಾಗುವವರು ಕೋವಿಡ್-19 ನಿಯಮಗಳನ್ನು ಪಾಲಿಸುವಂತೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.

error: Content is protected !!