ಜ.25 ರಂದು ರಾಷ್ಟ್ರೀಯ ಮತದಾರರ ದಿನ

January 23, 2021

ಮಡಿಕೇರಿ ಜ.23 : ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಮತದಾರರ ದಿನ-2021 ಕಾರ್ಯಕ್ರಮವು ಜನವರಿ, 25 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಜಿನರಾಳಕರ ಭೀಮರಾವ ಲಗಮಪ್ಪ, ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ಮತದಾರರ ನೋಂದಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ಪಿ.ಎಸ್.ಮಹೇಶ್, ಇತರರು ಪಾಲ್ಗೊಳ್ಳಲಿದ್ದಾರೆ.

error: Content is protected !!