ವಿರಾಜಪೇಟೆಯಲ್ಲಿ ನೇತಾಜಿ ಜಯಂತಿ : ಸುಭದ್ರ ರಾಷ್ಟ್ರ ಕಟ್ಟಲು ನೇತಾಜಿ ನೀಡಿದ ಕೊಡುಗೆ ಅಪಾರ: ಪ್ರಾಧ್ಯಾಪಕ ಬಿ.ಕೆ ಪ್ರಕಾಶ್

January 23, 2021

ಮಡಿಕೇರಿ ಜ.23 : ಸುಭದ್ರವಾದ ರಾಷ್ಟ್ರಕಟ್ಟಲು ನೇತಾಜಿ ಸುಭಾಷ್ ಚಂದ್ರಬೋಸ್ ರವರು ದೇಶಕ್ಕೆ ನೀಡಿರುವ ಕೊಡಗೆ ಅಪಾರವಾಗಿದೆ ಎಂದು, ಹನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಕೆ ಪ್ರಕಾಶ್ ಅಭಿಪ್ರಾಯಪಟ್ಟರು.

ವಿರಾಜಪೇಟೆ ಸರ್ಕಾರಿ ಪ್ರಥಮ‌‌ ದರ್ಜೆ ಕಾಲೇಜಿನ‌ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಇತಿಹಾಸ ವಿಭಾಗದ ಸಹಯೋಗದಲ್ಲಿ ಕಾಲೇಜಿನ ಬಿ.ಎ ವಿಭಾಗದ ಡಾ. ಎಪಿಜೆ ಅಬ್ದುಲ್ ಕಲಾಂ ಮೆಮೋರಿಯಲ್ ಹಾಲ್ ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 124 ನೇ ಜಯಂತಿಯ ಪ್ರಯುಕ್ತ ನಡೆದ ವಿಶೇಷ ಉಪನ್ಯಾಸಕ ಕಾರ್ಯಕ್ರಮಕ್ಕೆ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಿ.ಕೆ ಪ್ರಕಾಶ್ ಮಾತನಾಡಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಆರಂಭಿಕ ಜೀವನ, ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಅವರ ಪಾತ್ರ,ಹಾಗೂ ಸುಭದ್ರ ರಾಷ್ಟ್ರವನ್ನು ಕಟ್ಟಲು ನೇತಾಜಿ ಅವರು ನೀಡಿದ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಬಿ.ಕೆ ಪ್ರಕಾಶ್ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ .ಟಿ.ಕೆ ಬೋಪಯ್ಯ, ವಿದ್ಯಾರ್ಥಿಗಳು ಸುಭಾಷ್ ಚಂದ್ರಬೋಸ್ ರವರ ಅಪ್ರತಿಮ ದೇಶಭಕ್ತಿ ಹಾಗೂ ಅವರ ಆದರ್ಶ ಆಶಯಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ರುದ್ರ, ಸಹಾಯಕ ಪ್ರಾಧ್ಯಾಪಕರಾದ ಶೃತಿ ಪಾರ್ವತಿ, ಉಪನ್ಯಾಸಕರು, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

error: Content is protected !!