ಕಾಂಗ್ರೆಸ್ ಕಡೆ ಮುಖ ಮಾಡಿದ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಗಣೇಶ್

January 23, 2021

ಮಡಿಕೇರಿ ಜ.23 : ಜಿಲ್ಲಾ ಜಾತ್ಯತೀತ ಜನತಾದಳದ ಸಂಘಟನಾ ಕಾರ್ಯದರ್ಶಿ ಬೊಳ್ಳಿಯಂಡ ಗಣೇಶ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ತಾವು ಸಮಸ್ಯೆಯೊಂದರಲ್ಲಿ ಸಿಲುಕಿಕೊಂಡಾಗ ಜೆಡಿಎಸ್ ಜಿಲ್ಲಾಧ್ಯಕ್ಷರು ಸೇರಿದಂತೆ ಯಾವ ಪ್ರಮುಖರೂ ಸ್ಪಂದಿಸಿಲ್ಲವೆಂದು ಆರೋಪಿಸಿದ್ದಾರೆ. ಸಂಕಷ್ಟದಲ್ಲಿದ್ದಾಗ ಕಾಂಗ್ರೆಸ್ ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಡಿಸಿಸಿ ಸದಸ್ಯ ಪುಷ್ಪಪೂಣಚ್ಚ, ಯುವ ಕಾಂಗ್ರೆಸ್ ಅಧ್ಯಕ್ಷ ಸದಾಮುದ್ದಪ್ಪ ಹಾಗೂ ಇತರ ಪ್ರಮುಖರು ನೆರವಿಗೆ ಬಂದಿದ್ದಾರೆ. ಕಾಂಗ್ರೆಸ್‍ನ ಈ ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದಾಗಿ ಗಣೇಶ್ ತಿಳಿಸಿದ್ದಾರೆ.
ಈಗಾಗಲೇ ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಮುಖಂಡರುಗಳಾದ ಎ.ಎಸ್.ಪೊನ್ನಣ್ಣ, ಹೆಚ್.ಎಸ್.ಚಂದ್ರಮೌಳಿ ಹಾಗೂ ಹರೀಶ್ ಬೋಪಣ್ಣ ಅವರುಗಳೊಂದಿಗೆ ಮಾತುಕತೆ ನಡೆಸಿದ್ದು, ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದಾಗಿ ಅವರು ಹೇಳಿದ್ದಾರೆ.

error: Content is protected !!