ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು : ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

January 23, 2021

ಮಡಿಕೇರಿ, ಜ.23; ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಳ್ಳಲಾಗಿರುವ ೧೫ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಸಾಹಿತಿ ಮಂಡೇಪಂಡ ಗೀತಾ ಮಂದಣ್ಣ ಅವರಿಗೆ ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನ ನೀಡಲಾಯಿತು.  ಅಮ್ಮತ್ತಿ ಬಳಿಯ ಬಿಳಗುಂದ-ಮುಂಡೋಣಿಯಲ್ಲಿರುವ ಗೀತಾ ಅವರ ಮನೆಗೆ ಕಸಾಪ ಪದಾಧಿಕಾರಿಗಳು ತೆರಳಿ ಫಲ ತಾಂಬೂಲ, ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಗೀತಾ ಅವರ ಪತಿ ಮಂದಣ್ಣ, ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ನಿರ್ದೇಶಕರುಗಳಾದ ಧನಂಜಯ, ತಳೂರು ಉಷಾರಾಣಿ, ಡಿ.ಹೆಚ್.ಪುಷ್ಪ, ಶ್ವೇತಾ ಇದ್ದರು.