ಕೊಡಗಿನಲ್ಲಿ ಕೋವಿಡ್ : 52 ಸಕ್ರಿಯ ಪ್ರಕರಣ

25/01/2021

ಮಡಿಕೇರಿ ಜ. 25 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 3 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5981 ಆಗಿದ್ದು, 5848 ಮಂದಿ ಗುಣಮುಖರಾಗಿದ್ದಾರೆ. 52
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 27 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.