ಬೆಳೆ ನಷ್ಟ ಪರಿಹಾರ ಮಂಜೂರಾತಿಗೆ ಶಾಸಕ ಕೆ.ಜಿ.ಬೋಪಯ್ಯ ಮನವಿ

January 25, 2021

ಮಡಿಕೇರಿ ಜ.25 : ಕಳೆದ ಜನವರಿ ತಿಂಗಳಿನಲ್ಲಿ ಕೊಡಗು ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ಭತ್ತ ಕೃಷಿ ಮತ್ತು ಕಾಫಿಯು ತೀವ್ರವಾಗಿ ನೆಲಕ್ಕೆ ಉದುರಿ ಉತ್ತಮ ಫಸಲು ನಷ್ಟವಾಗಿದೆ. ಇದರಿಂದಾಗಿ ಜಿಲ್ಲೆಯ ರೈತರು ಸಾಕಷ್ಟು ಸಂಕಷ್ಟವನ್ನು ಅನುಭವಿಸಿರುತ್ತಾರೆ ಎಂದು ಮುಖ್ಯಮಂತ್ರಿ ಅವರಿಗೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಪತ್ರ ಬರೆದಿದ್ದಾರೆ.
ಅಕಾಲಿಕ ಮಳೆಯಿಂದ ಉಂಟಾಗಿರುವ ಬೆಳೆ ನಷ್ಟ ಸಂಬಂಧ ಕೊಡಗು ಜಿಲ್ಲೆಯ ಪಾರಾಣೆ ಗ್ರಾಮಸ್ಥರು ಸಲ್ಲಿಸಿರುವ ಮನವಿಯಂತೆ ಹಾಗೂ ವಾಸ್ತವಿಕ ಸ್ಥಿತಿಯಂತೆ ತಕ್ಷಣವೇ ಬೆಳೆ ನಷ್ಟ ಪರಿಹಾರವನ್ನು ಮಂಜೂರು ಮಾಡುವಂತೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದಾರೆ.

error: Content is protected !!