ಜ.26 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

January 25, 2021

ಮಡಿಕೇರಿ ಜ.25 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜನವರಿ, 26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಜ.26 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ 72 ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ.
ನಂತರ ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಘನತೆವೆತ್ತ ಭಾರತದ ರಾಷ್ಟ್ರಪತಿಗಳು ಮಡಿಕೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಪೂರ್ವ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.