ಕೊಡಗು ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರಾಗಿ ಕೆ.ಎಸ್.ಪ್ರಕಾಶ್ ಆಯ್ಕೆ

25/01/2021

ಮಡಿಕೇರಿ ಜ.25 : ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಆಡಳಿತ ಮಂಡಳಿ ಸಭೆಯು ಸೋಮವಾರ ಸೀತಾಲಕ್ಷ್ಮಿ ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕೆ.ಎಸ್.ಪ್ರಕಾಶ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಹಾಗೂ ಕಾರ್ಯಾಧ್ಯಕ್ಷರಾಗಿ ಬಿ.ಕೆ.ರವೀಂದ್ರ ರೈ ಅವರನ್ನು ಆಯ್ಕೆ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.