ಪೊಲೀಸ್ ಅಧಿಕಾರಿ ಜಿತೇಂದ್ರ ರೈಗೆ ರಾಷ್ಟ್ರಪತಿ ಪದಕದ ಗರಿ

January 25, 2021

ಮಡಿಕೇರಿ ಜ.25 : ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿತೇಂದ್ರ ರೈ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
ಕೊಡಗು ಜಿಲ್ಲಾ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯದಳದಲ್ಲಿ ಜಿತೇಂದ್ರ ಅವರು ಸಲ್ಲಿಸಿದ ಉತ್ತಮ ಸೇವೆಗಾಗಿ ಪ್ರಶಸ್ತಿ ಲಭಿಸಿದೆ. ಪ್ರಸ್ತುತ ಇವರು ಬಾಂಬ್ ನಿಷ್ಕ್ರಿಯದಳದಲ್ಲಿ ಎಎಸ್‍ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

error: Content is protected !!