ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ 72ನೇ ಗಣರಾಜ್ಯೋತ್ಸವ

January 26, 2021

ಮಡಿಕೇರಿ ಜ.26 : ಜಿಲ್ಲಾಡಳಿತ ವತಿಯಿಂದ ನಗರದಲ್ಲಿ 72ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವರಾದ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಪಾಲ್ಗೊಂಡಿದ್ದರು.

error: Content is protected !!