ಜ. 29 ರಿಂದ ಚೆಟ್ಟಳ್ಳಿಯಲ್ಲಿ ಕಾವೇರಿ ಕ್ರೀಡಾಕೂಟ

January 26, 2021

ಮಡಿಕೇರಿ ಜ.26 : ಪೊಂಗಲ್ ಹಬ್ಬದ ಪ್ರಯುಕ್ತ ಕೊಡಗು ಜಿಲ್ಲಾ ತಮಿಳು ಯುವ ಒಕ್ಕೂಟದ ವತಿಯಿಂದ ಸಮುದಾಯ ಬಾಂಧವರಿಗಾಗಿ ಜ. 29 ರಿಂದ 30, 31ರವರೆಗೆ ಜಿಲ್ಲಾ ಮಟ್ಟದ ಕಾವೇರಿ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳು ಚೆಟ್ಟಳ್ಳಿಯ ಪ್ರೌಢ ಶಾಲಾ ಮೈದಾನದಲ್ಲಿ ನಡೆಯಲಿದೆ.
ಕ್ರೀಡಾಕೂಟವನ್ನು ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಶ್ರೀ ಮೋಹನ್ ರಾಜ್ ರವರು ಉದ್ಘಾಟಿಸಿ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ.
ಮೂರು ದಿನಗಳ ಕಾಲ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದ್ದು, ಜ.29, 30ರಂದು ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, 20 ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ.
ಜ.31ರಂದು ನಡೆಯಲಿರುವ ಸಮಾರೋಪ ಸಮಾರಂಭವನ್ನು ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಪ್ರಭಾಕರನ್, ಕಾರ್ತಿಕ್ ವ್ಯವಸ್ಥಾಪಕರು ಟಾಟಾ ಕಾಫಿ, ಮತ್ತು ಕರ್ನಾಟಕ ರಾಜ್ಯದ ತಮಿಳು ಸಂಘಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಅಂದು ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಹಗ್ಗಜಗ್ಗಾಟ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಕ್ಕಳಿಗೆ, ಯುವಕ, ಯುವತಿ, ಮಹಿಳೆಯರಿಗೆ ಹಾಗೂ ವೃದ್ಧರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯುತ್ತದೆ.
ಮಧ್ಯಾಹ್ನನದ ಭೋಜನ ಕೂಟದ ಬಳಿಕ ಮುಖ್ಯ ಅತಿಥಿಗಳು ಸಾಂಸ್ಕೃತಿಕ ಕಾರ್ಯಮಕ್ಕೆ ಚಾಲನೆ ನೀಡಲಿದ್ದು, ಸಾಂಸ್ಕೃತಿಕ ನೃತ್ಯ ಸ್ಪರ್ಧೆ ಹಾಗೂ ವಿವಿಧ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ.
ಸಮಾರೋಪ ಸಮಾರಂಭದಲ್ಲಿ ಇತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಸಮುದಾಯ ಬಾಂಧವರನ್ನು ಸನ್ಮಾನಿಸಲಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಹಂತಗಳಲ್ಲಿ ಶೇ.75 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಈ ಸಂದರ್ಭ ವಿವಿಧ ಕ್ರೀಡಾಕೂಟದ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ.
ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳಿಗೆ ಪ್ರವೇಶ ಶುಲ್ಕ ₹2000 ವನ್ನು ನಿಗದಿ ಪಡಿಸಲಾಗಿದ್ದು, ಮುಂಗಡವಾಗಿ ಪಾವತಿಸಿ ತಂಡದ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ವಿಜೇತ ತಂಡ ಹಾಗೂ ರನ್ನರ್ ಆಫ್ ತಂಡಕ್ಕೆ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತದೆ. ಹಗ್ಗಜಗ್ಗಾಟ ಹಾಗೂ ಇತರ ಸ್ಪರ್ಧೆಗಳಲ್ಲಿ ಭಾಗವಹಿಸುವವರು ಯಾವುದೇ ಶುಲ್ಕ ಪಾವತಿಸದೆ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು.
ಕ್ರಿಕೆಟ್ ಪಂದ್ಯಾಟ ಸೂಪರ್ 8 ಮಾದರಲ್ಲಿ(8+1) ನಡೆಯಲಿದೆ.
2019-20ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಹಂತಗಳಲ್ಲಿ ಶೇ. 75 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ನಕಲಿ ಅಂಕಪಟ್ಟಿ, ಸಂಪರ್ಕ ಸಂಖ್ಯೆ ಹಾಗೂ ಸಂಪೂರ್ಣ ವಿವರವನ್ನು ವಾಟ್ಸ್ ಆ್ಯಪ್ ನಂಬರ್ +919945103012 ಅಥವಾ kodagutamilyouthfederation@gmail.com ಗೆ ಮೇಲ್ ಕಳುಹಿಸಿಸಬಹುದಾಗಿದೆ.
ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮದ ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರ. ಕಾರ್ಯದರ್ಶಿ ಮೋಹನ್ ರಾಜ್ : 9108255266 / 9945103012, ಉಪಾಧ್ಯಕ್ಷ ಕದಿರೇಶ್ : 99809 89584, ಖಜಾಂಚಿ ಸುರೇಶ್ :9741935471.
ಇವರನ್ನು ಸಂಪರ್ಕಿಸಬಹುದಾಗಿದೆ.
ಜಿಲ್ಲೆಯ ನಾನಾ ಕಡೆಗಳಲ್ಲಿ ನೆಲೆಸಿರುವ ಸಮುದಾಯ ಬಾಂಧವರು ಈ ಕಾರ್ಯಕ್ರಮಕ್ಕೆ ಆಗಮಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಕೊಡಗು ಜಿಲ್ಲಾ ಕಾವೇರಿ ತಮಿಳು ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!