ಇಂದಿರಾನಗರದಲ್ಲಿ ಶ್ರಮದಾನದ ಮೂಲಕ ಗಣರಾಜ್ಯೋತ್ಸವ ಆಚರಣೆ

January 26, 2021

ಮಡಿಕೇರಿ ಜ.26 : ಇಂದಿರಾನಗರದ ಜ್ಯೋತಿ ಯುವಕ ಸಂಘದ ವತಿಯಿಂದ 72ನೇ ವರ್ಷದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಹಿರಿಯರಾದ ಕೆ.ಎಂ ಪ್ರಕಾಶ್ ಧ್ವಜಾರೋಹಣವನ್ನು ನೆರವೇರಿಸಿದರು.
ಗಣರಾಜ್ಯೋತ್ಸವದ ಪ್ರಯುಕ್ತ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಇಂದಿರಾನಗರದಲ್ಲಿ ಶ್ರಮದಾನ ಮಾಡುವ ಮೂಲಕ ರಸ್ತೆಯನ್ನು ದುರಸ್ತಿ ಗೊಳಿಸಿದರು.
ಈ ಸಂದರ್ಭ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

error: Content is protected !!