ಮೊಣಕಾಲ್ಮೂರು ಶಾಲೆಯಲ್ಲಿ ಗಣರಾಜ್ಯೋತ್ಸವ

January 26, 2021

ಮಡಿಕೇರಿ ಜ.26 : ಕರ್ಣಂಗೇರಿ ಗ್ರಾಮದ ಮೊಣಕಾಲ್ಮೂರು ಶಾಲೆ ಆವರಣದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಅವರು ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವದ ಕುರಿತು ಮಾತನಾಡಿದರು. ಸದಸ್ಯರುಗಳಾದ ಅನಿತಾ, ಪುಷ್ಪಲತಾ, ಪ್ರಮೀಳಾ ಮತ್ತಿತರ ಪ್ರಮುಖರು ಹಾಜರಿದ್ದರು. ಮುಖ್ಯ ಶಿಕ್ಷಕ ಜನಾರ್ಧನ ಅವರು ಗಣರಾಜ್ಯೋತ್ಸವ ಆಚರಣೆಯ ಬಗ್ಗೆ ವಿವರಿಸಿದರು.

error: Content is protected !!