Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:56 AM Friday 22-October 2021

ರಾಷ್ಟ್ರಪತಿ ಭೇಟಿ ಹಿನ್ನೆಲೆ : ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಉಸ್ತುವಾರಿ ಸಚಿವ ಸೋಮಣ್ಣ

26/01/2021

ಮಡಿಕೇರಿ ಜ.26 : ರಾಷ್ಟ್ರದ ಘನವೆತ್ತ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಫೆಬ್ರವರಿ 6 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ, ನಾಡಿನ ಜೀವನದಿ ತಲಕಾವೇರಿಗೆ ಭೇಟಿ ಹಾಗೂ ನಗರದಲ್ಲಿನ ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸ್ಮಾರಕ ಭವನ ಉದ್ಘಾಟಿಸಲಿದ್ದು, ಈ ಕಾರ್ಯಕ್ರಗಳ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮನವಿ ಮಾಡಿದ್ದಾರೆ.
ರಾಷ್ಟ್ರಪತಿ ಅವರ ಭೇಟಿ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರಪತಿ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆ ದಕ್ಷಿಣ ಭಾಗದ ನಾಲ್ಕು ರಾಜ್ಯಗಳ ಹಲವು ಭಾಗಗಳಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ನದಿ ಉಗಮಸ್ಥಾನ ಮತ್ತು ವೀರ ಸೇನಾನಿಗಳ ನಾಡು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ. ಆದ್ದರಿಂದ ಕೊಡಗಿನ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸಲು ಎಲ್ಲರೂ ಶ್ರಮಿಸಬೇಕಿದೆ ಎಂದು ಸಚಿವರು ಕೋರಿದರು.
ರಾಷ್ಟ್ರಪತಿ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆ, ಯಾವುದೇ ರೀತಿಯ ಸಣ್ಣ ಚ್ಯುತಿ ಉಂಟಾಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ವಿ.ಸೋಮಣ್ಣ ಅವರು ಸೂಚಿಸಿದರು.
ಜೀವನದಿ ಕಾವೇರಿ ಉಗಮ ಸ್ಥಳ ತಲಕಾವೇರಿಗೆ ಭೇಟಿ ಜತೆಗೆ, ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೂ ರಾಷ್ಟ್ರಪತಿ ಅವರು ಭೇಟಿ ನೀಡಲು ಜಿಲ್ಲಾಡಳಿತ ಮನವಿ ಮಾಡಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ವಿ.ಸೋಮಣ್ಣ ಅವರು ಸಲಹೆ ಮಾಡಿದರು.
ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ತನ್ನದೇ ಆದ ಇತಿಹಾಸವಿದ್ದು, ವಿಶೇಷ ಮಹತ್ವ ಹೊಂದಿದೆ. ಭಗಂಡೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರೆ ಒಳ್ಳೆಯದಾಗಲಿದೆ. ಆದ್ದರಿಂದ ಪ್ರತಿ ವರ್ಷ ಭಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡುತ್ತೇನೆ ಎಂದು ವಿ.ಸೋಮಣ್ಣ ಅವರು ಇದೇ ಸಂದರ್ಭದಲ್ಲಿ ಪ್ರಕಟಿಸಿದರು.
ರಾಷ್ಟ್ರಪತಿ ಅವರ ಕೊಡಗು ಜಿಲ್ಲೆ ಭೇಟಿ ಹಿನ್ನೆಲೆ ಜಿಲ್ಲಾಡಳಿತವು ವಿವಿಧ ಉಪ ಸಮಿತಿಗಳನ್ನು ರಚಿಸಿದ್ದು, ಉಪ ಸಮಿತಿಗೆ ನಿಯೋಜಿಸಿರುವ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಜೊತೆಗೆ ವಹಿಸಿರುವ ಕೆಲಸವನ್ನು ಚಾಚುತಪ್ಪದೆ ಪಾಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಜಿಲ್ಲೆಯ ವಿವಿಧ ಎಂಜಿನಿಯರ್ ವಿಭಾಗದ ಅಧಿಕಾರಿಗಳು ಸದಾ ಜಿಲ್ಲಾಡಳಿತ ಜತೆ ಕೈಜೋಡಿಸಬೇಕು. ಶಿಸ್ತುಬದ್ಧವಾಗಿ ಮತ್ತು ಶಿಷ್ಠಾಚಾರದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ವಿ.ಸೋಮಣ್ಣ ಅವರು ತಿಳಿಸಿದರು.
ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರ ಸಲಹೆ, ಮಾರ್ಗದರ್ಶನ ಪಡೆದು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸಲಹೆ ಮಾಡಿದರು.
ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಮಾತನಾಡಿ ರಾಷ್ಟ್ರಪತಿ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಫೆಬ್ರವರಿ 5 ಮತ್ತು 6 ರಂದು ತಲಕಾವೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಇಲ್ಲದಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಇನ್ನಷ್ಟು ಪ್ರಚಾರ ಮಾಡಬೇಕಿದೆ ಎಂದು ಅವರು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಧ್ಯಪ್ರವೇಶಿಸಿ ಮಾತನಾಡಿ ಸಾರ್ವಜನಿಕರಿಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಇರದಂತೆ ಗಮನಹರಿಸಲಾಗುವುದು ಎಂದರು.
ರಾಷ್ಟ್ರಪತಿ ಅವರ ಕೊಡಗು ಜಿಲ್ಲೆ ಭೇಟಿ ಹಿನ್ನೆಲೆ ಈಗಾಗಲೇ ಅಧಿಕಾರಿಗಳನ್ನು ಒಳಗೊಂಡ ಹಲವು ಉಪ ಸಮಿತಿಗಳನ್ನು ರಚಿಸಲಾಗಿದೆ. ಜನವರಿ 29 ರಂದು ಅಂತಿಮ ಸಿದ್ಧತೆ ಬಗ್ಗೆ ಮಾಹಿತಿ ಲಭ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ ಯಾವ ಯಾವ ಸ್ಥಳಗಳಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಜೊತೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂಬ ಬಗ್ಗೆ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಡಿವೈಎಸ್‍ಪಿ ದಿನೇಶ್ ಕುಮಾರ್ ಅವರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನ, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಭಾಗಮಂಡಲದ ಕಾವೇರಿ ಕಾಲೇಜು ಬಳಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಂಸದರಾದ ಪ್ರತಾಪ್ ಸಿಂಹ ಅವರು ಮಾತನಾಡಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಭೇಟಿ ಹಿನ್ನೆಲೆ ಎಲ್ಲಿಯೂ ನ್ಯೂನ್ಯತೆ ಉಂಟಾದಂತೆ ನೋಡಿಕೊಳ್ಳಬೇಕು ಎಂದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಭಾರತೀಯ ಸೇನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದು, ಇವರಿಗೆ ಭಾರತರತ್ನ ನೀಡುವಂತಾಗಲು ರಾಷ್ಟಪತಿ ಅವರಿಗೆ ಮನವಿ ಸಲ್ಲಿಸಲು ಅವಕಾಶ ಒದಗಿಸಬೇಕು. ಸರ್ಕಾರದ ಪರವಾಗಿ ಜಿಲ್ಲಾಡಳಿತದಿಂದ ಮನವಿ ಸಲ್ಲಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷರಾದ ಕಂಡ್ರತಂಡ ಸುಬ್ಬಯ್ಯ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಭಾರತರತ್ನ ನೀಡುವಂತಾಗಲು ರಾಜ್ಯ ಸರ್ಕಾರದಿಂದ ಮನವಿ ಸಲ್ಲಿಸುವಂತಾಗಬೇಕು ಎಂದು ಕೋರಿದರು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರು ಕೊಡಗು ಜಿಲ್ಲೆಗೆ ಮಾತ್ರವಲ್ಲ, ಇಡೀ ರಾಜ್ಯ ಮತ್ತು ದೇಶಕ್ಕೆ ಎರಡು ಕಣ್ಣುಗಳಿದ್ದಂತೆ, ಆದ್ದರಿಂದ ಇಬ್ಬರು ವೀರ ಸೇನಾನಿಗಳಿಗೆ ಭಾರತ ರತ್ನ ನೀಡುವಂತಾಗಬೇಕು ಎಂದು ಅವರು ಮನವಿ ಮಾಡಿದರು.
ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ರಾಷ್ಟ್ರಪತಿ ಅವರ ಕಚೇರಿಯಿಂದ ಬರುವ ಆದೇಶಗಳನ್ನು ಪ್ರತಿಯೊಬ್ಬರೂ ಚಾಚುತಪ್ಪದೆ ಪಾಲಿಸಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಕೋರಿದರು.
ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಅವರು ರಾಷ್ಟ್ರಪತಿ ಭೇಟಿ ಹಿನ್ನೆಲೆ ಹಲವು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ, ನಾನಾ ಇಲಾಖೆ ಅಧಿಕಾರಿಗಳು ಇತರರು ಹಾಜರಿದ್ದರು.