ಜನರಲ್ ತಿಮ್ಮಯ್ಯ ಸ್ಮಾರಕ ಭವನ : ಅಂತಿಮ ಹಂತದ ಸಿದ್ಧತೆ

January 26, 2021

ಮಡಿಕೇರಿ ಜ.26 : ನಗರದ ಸನ್ನಿಸೈಡ್‍ನಲ್ಲಿ ಫೆಬ್ರವರಿ 6 ರಂದು ರಾಷ್ಟ್ರಪತಿ ಅವರಿಂದ ಉದ್ಘಾಟನೆ ಸಿದ್ಧವಾಗಿರುವ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಚಾರುಲತ ಸೋಮಲ್ ಇತರರು ಮಂಗಳವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ವೈಶಿಷ್ಟ್ಯತೆ ಬಗ್ಗೆ ಮೇಜರ್ ಬಿದ್ದಂಡ ನಂಜಪ್ಪ ಅವರು ಮಾಹಿತಿ ನೀಡಿದರು.

error: Content is protected !!