ಮಡಿಕೇರಿಯಲ್ಲಿ ಮುಳಿಯ ಬಸ್ ತಂಗುದಾಣ ಉದ್ಘಾಟನೆ

January 26, 2021

ಮಡಿಕೇರಿ ಜ.26 : ಮುಳಿಯ ಗ್ರೂಪ್ ಸಹಕಾರದೊಂದಿಗೆ ನಗರದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ವೃತ್ತದ ಬಳಿ ನೂತನವಾಗಿ ನಿರ್ಮಿಸಿರುವ ಬಸ್ ತಂಗುದಾಣವನ್ನು ಜಿಲ್ಲಾ ಉಸ್ತುವಾರಿ ಸಚಿವÀ ವಿ.ಸೋಮಣ್ಣ ಅವರು ಉದ್ಘಾಟಿಸಿದರು. ಮುಳಿಯ ಗ್ರೂಪ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಬಸ್ ತಂಗುದಾಣವನ್ನು ನಗರಸಭೆಗೆ ಹಸ್ತಾಂತರಿಸಿದರು.
ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಪೌರಾಯುಕ್ತ ಎಸ್.ವಿ.ರಾಮದಾಸ್ ಮತ್ತಿತರ ಪ್ರಮುಖರು ಹಾಜರಿದ್ದರು.

error: Content is protected !!