ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 46

January 27, 2021

ಮಡಿಕೇರಿ ಜ. 27 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 2 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5992 ಆಗಿದ್ದು, 5865 ಮಂದಿ ಗುಣಮುಖರಾಗಿದ್ದಾರೆ. 46
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 26 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!