ಜ.30 ರಂದು ಹುತಾತ್ಮರ ದಿನಾಚರಣೆ

January 27, 2021

ಮಡಿಕೇರಿ ಜ.27 : ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜ.30 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಿಂದ ಮೆರವಣಿಗೆಯಲ್ಲಿ ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದಲ್ಲಿರಿಸಿ ಬೆಳಗ್ಗೆ 10.30 ಗಂಟೆಗೆ ಮೌನ ಆಚರಿಸಿ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!